Monday, August 3, 2026
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಎಸಗಿದ ಪ್ರಕರಣ; ಆರೋಪಿ ಖಾಕಿ ವಶಕ್ಕೆ..!

- Advertisement -
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ಇಲ್ಲಿನ ಉಳ್ಳಾಲ ಪೊಲೀಸ್‌‌‌‌‌‌ ಠಾಣಾ ವ್ಯಾಪ್ತಿಯ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಆರೋಪಿಯನ್ನು ನಗರದ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂಜತ್ತೂರಿನ ಗೌತಮ್‌‌ ಎನ್ನಲಾಗಿದೆ.

vtv vitla

ಕಳೆದ ಎರಡು ವರ್ಷದಿಂದ ಆರೋಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿತ್ತು. ನಂತರ ಈ ಪ್ರಕರಣವನ್ನು ನಗರದ ಮಹಿಳಾ ಠಾಣೆಗೆ ವರ್ಗಾಯಿಸಲಾಗಿತ್ತು.

17 ಹರೆಯದ ಬಾಲಕಿಯನ್ನು ಮದುವೆ ಮಾಡಿಕೊಡಬೇಕು ಎಂದು ಬಾಲಕಿಯ ಮನೆಯವರನ್ನು ಆರೋಪಿಯು ಒತ್ತಾಯ ಮಾಡುತ್ತಿದ್ದ. ಅಲ್ಲದೇ, ಫೋನ್‌ ಕರೆ ಮಾಡಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಯುವತಿಯ ತಾಯಿ ಇದರಿಂದ ನೊಂದಿದ್ದು, ದೂರು ನೀಡಿದ್ದರು. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಗೌತಮ್‌ ಅನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!