Monday, September 21, 2026
spot_imgspot_img
spot_imgspot_img

ರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

- Advertisement -
- Advertisement -
vtv vitla
vtv vitla

ಮಂಡ್ಯ: ನಗರದ ಕಲ್ಲಹಳ್ಳಿ ಬಡಾವಣೆಯ ರೈಲ್ವೆ ಹಳಿ ಸಮೀಪ ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ರಕ್ಷಿತ್ ಅಲಿಯಾಸ್​ ರಕ್ಷಿ (21) ಎಂಬಾತ ಕೊಲೆಯಾಗಿರುವ ಯುವಕ. ಈತ ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ನಿವಾಸಿಯಾಗಿದ್ದು, ನಿನ್ನೆ ತಡರಾತ್ರಿ ಕೊಲೆಯಾಗಿದ್ದಾನೆ.

ಯುವಕನಿಗೆ ಫೋನ್ ಕರೆ ಮಾಡಿ ಕರೆಯಿಸಿಕೊಂಡ ದುಷ್ಕರ್ಮಿಗಳು ರಸ್ತೆಯಲ್ಲಿ ಅಟ್ಟಾಡಿಸಿ ಬರ್ಬರ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಡ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
- Advertisement -

Related news

error: Content is protected !!