

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ (ನಿ.) ಇದರ ಶತಮಾನೋತ್ಸವದ ನೂತನ ಕಟ್ಟಡ ‘ಶತಾಮೃತ’ದ ಉದ್ಘಾಟನೆಯು ಡಿ.25 ರ ಶನಿವಾರದಂದು ನಡೆಯಲಿದೆ. ಈ ಕಾರ್ಯಕ್ರಮದ ಪತ್ರಿಕಾಗೋಷ್ಠಿ ಇಂದು ನಡೆಯಿತು. ಈ ವೇಳೆ ಇಡ್ಕಿದು ಸೇವಾ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷ ಸುಧಾಕರ ಶೆಟ್ಟಿ ಕಾರ್ಯಕ್ರಮದ ವಿವರ ತಿಳಿಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಮತ್ತು ಶ್ರೀರಾಮ ವಿದ್ಯಾಕೇಂದ್ರದ ಸ್ಥಾಪಕರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ‘ಶತಾಮೃತ’ದ ಉದ್ಘಾಟನೆಯನ್ನು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರು ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.

ಬ್ಯಾಂಕಿಂಗ್ ವಿಭಾಗದ ಉದ್ಘಾಟನೆಯನ್ನು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ರವರು ನೆರವೇರಿಸಲಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭದ್ರತಾ ಕೊಠಡಿ ಉದ್ಘಾಟನೆ, ಉರಿಮಜಲು ವೆಂಕಪ್ಪಯ್ಯ ಸಭಾಂಗಣ ಉದ್ಘಾಟನೆ, ವಾಣಿಜ್ಯ ಸಂಕೀರ್ಣ ಉದ್ಘಾಟನೆ, ಅತಿಥಿ ಗೃಹ ಉದ್ಘಾಟನೆ, ಸೂಪರ್ ಬಜಾರ್ ನ ಉದ್ಘಾಟನೆ, ಗೋದಾಮಿನ ಉದ್ಘಾಟನೆ, ಸ್ಮರಣ ಸಂಚಿಕೆ ಬಿಡುಗಡೆಯನ್ನು ವಿವಿಧ ಕ್ಷೇತ್ರದ ಗಣ್ಯರು ನೆರವೇರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


