Monday, September 28, 2026
spot_imgspot_img
spot_imgspot_img

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಇಂದು ರಾಜೇಶ್ ಭಟ್ ಜಾಮೀನು ಅರ್ಜಿಯ ವಿಚಾರಣೆ

- Advertisement -
- Advertisement -
vtv vitla
vtv vitla

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೇಶ್ ಭಟ್ ನ್ಯಾಯಾಲಯಕ್ಕೆ ಹಾಜರಾಗಿದ್ದು, ಜಾಮೀನು ಅರ್ಜಿ ಇಂದು ವಿಚಾರಣೆ ನಡೆಯಲಿದೆ.

ಅ. 18ರಂದು ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ರಾಜೇಶ್ ಭಟ್ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ. ರಾಜೇಶ್ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.

ಹೈಕೋರ್ಟ್‌ನಲ್ಲಿಯೂ ರಾಜೇಶ್ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಹೈಕೋರ್ಟ್‌ನಲ್ಲಿಯೂ ಕೂಡ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ರಾಜೇಶ್ ಭಟ್ ಗೆ ಸಹಕಾರ ನೀಡಿದ ಆರೋಪದಲ್ಲಿ ಓರ್ವ ಮಹಿಳೆ ಸೇರಿದಂತೆ, ಇಬ್ಬರನ್ನು ಆರಂಭದಲ್ಲಿಯೇ ಪೊಲೀಸರು ಬಂಧಿಸಿದ್ದರು.

vtv vitla
vtv vitla

ಈ ನಡುವೆ ರಾಜೇಶ್ ಭಟ್ ಅವರ ಎಲ್ಲಾ ಬ್ಯಾಂಕ್ ಖಾತೆಗಳನ್ನು ಪೊಲೀಸರು ಸ್ಥಗಿತಗೊಳಿಸಿದ್ದರು. ಮಂಗಳೂರು ಪೊಲೀಸರು ಲುಕ್ ಔಟ್ ನೋಟೀಸು ಕೂಡ ಜಾರಿಗೊಳಿಸಿದ್ದರು. ಪೊಲೀಸರ ಕೈಗೆ ಸಿಗದೆ ಇದೀಗ ಆರೋಪಿ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

vtv vitla

vtv vitla
- Advertisement -

Related news

error: Content is protected !!