Tuesday, June 23, 2026
spot_imgspot_img
spot_imgspot_img

ಮೇಕೆದಾಟು ಪಾದಾಯಾತ್ರೆ ತಡೆಯಲು ಅರಗ ಜ್ಞಾನೇಂದ್ರ ಮತ್ತೊಂದು ಜನ್ಮ ಹುಟ್ಟಿ ಬರಬೇಕು- ಡಿ.ಕೆ.ಶಿ ಸವಾಲು

- Advertisement -
- Advertisement -
vtv vitla
vtv vitla
vtv vitla
vtv vitla
vtv vitla

ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತೊಂದು ಜನ್ಮ ಹುಟ್ಟಿ ಬರಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರನ್ನು ಬೇಕಾದರೂ ಬಂಧಿಸಲಿ. ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಪಾಲಿಸಿ ಕಾರ್ಯಕ್ರಮ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

vtv vitla

ರಾಜ್ಯದಲ್ಲಿ ಕೊವಿಡ್ ನಿರ್ಬಂಧ ಮಾಡಿ ವಿಧಾನಪರಿಷತ್ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ?

ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ’ ಎಂದರು.

suvarna gold
- Advertisement -

Related news

error: Content is protected !!