
ವಿಟ್ಲ: ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ಘಟನೆಯ ವಿರುದ್ಧ ವಿಟ್ಲದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ಬಸ್ ಸ್ಟಾಂಡ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ವರ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದ್ದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಹಿಂದೂಗಳ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ್ದನ್ನು ಖಂಡಿಸಿ ವಿಟ್ಲದಲ್ಲಿ ಇದೀಗ ಪ್ರತಿಭಟನೆ ನಡೆಯುತ್ತಿದೆ. ಶಾಂತಿಯುತವಾಗಿದ್ದ ವಿಟ್ಲದಲ್ಲಿ ಈ ಘಟನೆಯು ಶಾಂತಿಯನ್ನು ಕದಡುವ ಪ್ರಯತ್ನವಾಗಿದೆ. ಕೇವಲ ಹಿಂದೂಗಳು ಮಾತ್ರವಲ್ಲದೆ, ಮುಸ್ಲಿಂ ಬಾಂಧವರು ಕೂಡಾ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂತಹ ಕೃತ್ಯವನ್ನೆಸಗಿ ಹಿಂದೂಗಳ ನಂಬಿಕೆಯನ್ನು ಟೀಕಿಸಿದ್ದಾರೆ, ಅಷ್ಟೇ ಅಲ್ಲದೇ ಕೊರಗ ಸಮುದಾಯವನ್ನುಅವಮಾನಿಸಿದ್ದಾರೆ. ಇದೀಗ ಅವಮಾನಿಸುದವರನ್ನು ಬಂಧಿಸುವಂತೆ ಅಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

ಪ್ರತಿಭಟನೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅರುಣ ವಿಟ್ಲ, ಮಾಜಿ ಸದಸ್ಯರಾದ ಶ್ರೀಕೃಷ್ಣ, ಮುರಳಿ ವಿಟ್ಲ, ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಶೆಟ್ಟಿ ಮಾಣಿ, ಹಿಂದು ಜಾಗರಣ ವೇದಿಕೆ ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂದೂ ಜಾಗರಣ ವೇದಿಕೆ ತಾಲೂಕ ಅಧ್ಯಕ್ಷರಾದ ಗಣೇಶ್ ಕಿರಿಲ ಪ್ರಧಾನ ಕಾರ್ಯದರ್ಶಿ ಅರುಣ್, ಸಜಿಪ ತಾಲೂಕು ಕಾರ್ಯದರ್ಶಿಗಳಾದ ಹರ್ಷ ವಿಟ್ಲ, ಚೇತನ್ ಕಡಂಬು ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.









