Friday, September 4, 2026
spot_imgspot_img
spot_imgspot_img

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥ!!

- Advertisement -
- Advertisement -
vtv vitla
vtv vitla

ಮಂಗಳೂರು: ಇಲ್ಲಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿಅಮೋನಿಯಾ ಕೆಮಿಕಲ್ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು, ಅವರಲ್ಲಿ 20 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!