Wednesday, July 2, 2025
spot_imgspot_img
spot_imgspot_img

ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ, ಒಮಿಕ್ರಾನ್; ಜ.13ರಂದು ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ

- Advertisement -
- Advertisement -
suvarna gold

ಒಂದೆಡೆ ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದರೆ, ಇನ್ನೊಂದೆಡೆ ಕೊರೊನಾ ಕೇಸ್ ಗಳೂ ಏರುತ್ತಿವೆ. ಸದ್ಯ ದೇಶದಲ್ಲಿ 8 ಲಕ್ಷಕ್ಕೂ ಅಧಿಕ ಸಕ್ರಿಯ ಕೊರೊನಾ ಪ್ರಕರಣಗಳಿವೆ. ಹಾಗೇ, ಒಮಿಕ್ರಾನ್ ಸೋಂಕಿತರ ಸಂಖ್ಯೆ 4 ಸಾವಿರಕ್ಕೂ ಮಿಗಿಲಾಗಿದೆ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 13ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್​ ಆಗಿ ಸಭೆ ನಡೆಸಲಿದ್ದಾರೆ. ಆಯಾ ರಾಜ್ಯಗಳಲ್ಲಿರುವ ಕೊವಿಡ್​ 19 ಪರಿಸ್ಥಿತಿ, ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳು, ಪಾಸಿಟಿವಿಟಿ ರೇಟ್​ ಹೇಗಿದೆ? ಸಾವಿನ ದರ ಎಷ್ಟಿದೆ? ಒಮಿಕ್ರಾನ್​ ಸೋಂಕಿತರ ಸಂಖ್ಯೆ ಎಷ್ಟು? ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್​ ಪ್ರಮಾಣ ಸರಿಯಾಗಿದೆಯಾ ಎಂಬ ಇತ್ಯಾದಿ ವಿಚಾರಗಳನ್ನು ಚರ್ಚಿಸಲಿದ್ದಾರೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಸಭೆ ನಡೆಸಿದ್ದರು. ಅದಾದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಕೂಡ ಸಭೆ ನಡೆಸುವುದಾಗಿ ತಿಳಿಸಿದ್ದರು. ಹಾಗೇ, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಮತ್ತು ಮಿಷನ್ ಮೋಡ್​​ನಲ್ಲಿ ಯುವಜನರಿಗೆ ಲಸಿಕೆ ನೀಡಲು ಭಾನುವಾರದ ಸಭೆಯಲ್ಲಿ ನಿರ್ದೇಶನ ನೀಡಿದ್ದರು. ಈ ಸಭೆಯಲ್ಲಿ ಗೃಹ ಸಚಿವ ಅಮಿತ್​ ಶಾ ಮತ್ತು ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್​ಸುಖ್ ಮಾಂಡವಿಯಾ ಕೂಡ ಪಾಲ್ಗೊಂಡಿದ್ದರು.

ದೇಶದಲ್ಲಿ ಐದು ರಾಜ್ಯಗಳಾದ ಗೋವಾ, ಉತ್ತರಪ್ರದೇಶ, ಉತ್ತರಾಖಂಡ್​, ಪಂಜಾಬ್​, ಮಣಿಪುರಗಳಲ್ಲಿ ಫೆ.10ರಿಂದ ಮಾರ್ಚ್​ 7ರ ವರೆಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್​ 10ರಂದು ಮತ ಎಣಿಕೆ. ಅಲ್ಲಿ ಲಸಿಕೆ ನೀಡಿಕೆ ವೇಗ ಹೆಚ್ಚಿಸುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಆದರೆ ದೇಶದಲ್ಲಿ ದಿನೇದಿನೆ ಕೊವಿಡ್​ 19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಂದು 1,68,063 ಪ್ರಕರಣಗಳು ದಾಖಲಾಗಿದ್ದು, 277 ಮಂದಿ ಮೃತಪಟ್ಟಿದ್ದಾರೆ. ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಪಾಲೇ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಇಂದು 33,470, ದೆಹಲಿಯಲ್ಲಿ 19,166, ತಮಿಳುನಾಡಿನಲ್ಲಿ 13,990 ಮತ್ತು ಕರ್ನಾಟಕದಲ್ಲಿ 11,698 ಕೇಸ್​ಗಳು ದಾಖಲಾಗಿವೆ.

vtv vitla
vtv vitla
- Advertisement -

Related news

error: Content is protected !!