Sunday, July 26, 2026
spot_imgspot_img
spot_imgspot_img

ವಿಟ್ಲ: ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಸನ್ಮಾನ

- Advertisement -
- Advertisement -

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಆರ್.ಕೆ ಕಲಾ ಸಂಸ್ಥೆ ವಿಟ್ಲ ಇದರ ವತಿಯಿಂದ ನೃತ್ಯ ಸಂಭ್ರಮ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ವಿಟ್ಲ ಅರಮನೆಯ ಬಂಗಾರು ಅರಸರು ಸನ್ಮಾನಿಸಿದರು.

vtv vitla

ಉದ್ಯಮಿ ಸುಬ್ರಾಯ ಪೈ, ಕೃಷ್ಣಯ್ಯ ಕೆ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ, ವಿಟ್ಲ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೇಶ್ ಶೆಟ್ಟಿ, ಬಿಕ್ಕಾಜೆ, ವಿಟ್ಲ ಜೇಸಿಐ ಅಧ್ಯಕ್ಷ ಚಂದ್ರಹಾಸ ಕೊಪ್ಪಳ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ, ವಿಟ್ಲ ಗ್ರಾಮೀಣ ಬ್ಯಾಂಕ್ ನ ಅಧ್ಯಕ್ಷ ಜಗನ್ನಾಥ್ ಸಾಲಿಯಾನ್, ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಸಿ.ಎಚ್, ಸಿವಿಲ್ ಎಂಜಿನಿಯರ್ ಸಂತೋಷ್ ಶೆಟ್ಟಿ ಪೆಲ್ತಡ್ಕ, ರಮಾನಾಥ ವಿಟ್ಲ ಉಪಸ್ಥಿತರಿದ್ದರು.

ಆರ್ ಕೆ ಆರ್ಟ್ಸ್ ನ ರಾಜೇಶ್ ವಿಟ್ಲ ಸ್ವಾಗತಿಸಿದರು. ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು ನಿರೂಪಿಸಿದರು. ಲತಾ ಲೋಕೇಶ್ ವಂದಿಸಿದರು.

- Advertisement -

Related news

error: Content is protected !!