Tuesday, September 1, 2026
spot_imgspot_img
spot_imgspot_img

ಮನೆಗೆ ನುಗ್ಗಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್..!

- Advertisement -
- Advertisement -
vtv vitla
vtv vitla

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

vtv vitla

ತಂದೆ ಊರಿಗೆ ಹೋಗಿದ್ದು, ಪುತ್ರಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೆಲಸಕ್ಕೆ ಹೋಗಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದ ಸಂದರ್ಭದಲ್ಲಿ ಪಕ್ಕದ ಮನೆಯ ಯುವಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿ ತಾಯಿ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಸ್ಥಳೀಯರ ನೆರವಿನಿಂದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ನಂದಿನಿ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

- Advertisement -

Related news

error: Content is protected !!