Friday, September 4, 2026
spot_imgspot_img
spot_imgspot_img

ಮಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಪರಿಷ್ಕೃತ ಮಾರ್ಗಸೂಚಿ ಜಾರಿ

- Advertisement -
- Advertisement -

ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ 19 ನಿಯಂತ್ರಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯು ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ಜನವರಿ 31ರಿಂದ ಜಾರಿಗೆ ಬರುವಂತೆ ಪ್ರತಿರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ. 2 ಡೋಸ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪಬ್, ಕ್ಲಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳು ಹಾಗೂ ಹೋಟೆಲ್ ಗಳಲ್ಲಿ ತಿನ್ನುವ ಸ್ಥಳಗಳಿಗೆ ಶೇ. 100 ರಷ್ಟು ಆಸನ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಮದುವೆ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶವನ್ನು ಕಲ್ಪಿಸಲಾಗಿದೆ.ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರ, ಸಭಾಭವನ ಗಳಲ್ಲಿ ಶೇಕಡ 50 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ದೇವಾಲಯಗಳಲ್ಲಿ ದರ್ಶನ ಮತ್ತು ಸೇವೆಗೆ ಅವಕಾಶ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ರ್‍ಯಾಲಿ, ಧರಣಿ, ಸಮಾವೇಶ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಕ್ರೀಡಾ ಸಂಕೀರ್ಣ, ಸ್ಟೇಡಿಯಂ, ಈಜುಕೊಳ ಮತ್ತು ಜಿಮ್ ಗಳಲ್ಲಿ ಶೇಕಡ 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಶೇಕಡ 100 ರಷ್ಟು ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

vtv vitla
vtv vitla

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ವಯ ಕೇರಳ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸಲಾಗುವುದು.

ಸಂಬಂಧಪಟ್ಟ ಅಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಈಗಾಗಲೇ ಹೊರಡಿಸಲಾದ ಕೋವಿಡ್ 19 ನಿಯಂತ್ರಣ ಕ್ರಮಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಗಳು ಪರಿಣಾಮಕಾರಿಯಾಗಿ ಪಾಲನೆ ಯಾಗುತ್ತಿರುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಯಾವುದೇ ವ್ಯಕ್ತಿ, ಜನರ ಗುಂಪು, ಸಮುದಾಯ, ಸಂಘ ,ಸಂಸ್ಥೆ , ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಇತ್ಯಾದಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸುವುದು ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಅನುಸರಿಸದಿರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರನ್ವಯ ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2022 ರ ಕಲಂ 4, 5 ಮತ್ತು 10 ರಂತೆ ಹಾಗೂ ಇತರ ಕಾನೂನು ನಿಬಂಧನೆಗಳ ಅನ್ವಯ ಕ್ರಮ ಕೈಗೊಳ್ಳಲಾಗುವುದು.

ತಕ್ಷಣದಲ್ಲಿ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಖಾಸಗಿ ಆಸ್ಪತ್ರೆಗಳು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಹಾಸಿಗೆಗಳನ್ನು ಸರ್ಕಾರ ಉಲ್ಲೇಖಿಸಿದ ಮತ್ತು ಖಾಸಗಿ ರೋಗಿಗಳ ನಡುವೆ ಹಂಚಿಕೊಳ್ಳಲು ಕೆಳಗಿನಂತೆ ಮಾರ್ಪಡಿಸಲಾಗಿದೆ. ಪ್ರತಿ ವರ್ಗದಲ್ಲಿ ಶೇಕಡ 10ರಷ್ಟು ಹಾಸಿಗೆಗಳು ಹಾಸಿಗೆಗಳು ಐಸಿಯು, ಐಸಿಯು ವಿತ್ ವೆಂಟಿಲೇಟರ್, ಹೆಚ್ ಡಿ ಯು, ಮತ್ತು ಸಾಮಾನ್ಯ ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಸೂಚಿಸಿದ ಕೋವಿಡ್ 19 ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡುವಂತೆ ಸೂಚಿಸಲಾಗಿದೆ.

vtv vitla
vtv vitla
- Advertisement -

Related news

error: Content is protected !!