Tuesday, April 30, 2024
spot_imgspot_img
spot_imgspot_img

ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಪೋಸ್ಟ್- ಶಿರಸಿಯಲ್ಲಿ 20 ಜನರ ಬಂಧನ.

- Advertisement -G L Acharya panikkar
- Advertisement -

ಕಾರವಾರ: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಪುಂಡರು ದಾಳಿ ಮಾಡಿದ ಪ್ರಕರಣವನ್ನು ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಯತ್ನದ ಮಾಡಿದ್ದ 20 ಜನರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಶಿರಸಿ ನಗರದ ಕೆಲವು ಸಂಘಟನೆಯ ಪುಂಡರು ಸಾಮಾಜಿಕ ಜಾಲತಾಣಗಳಾದ ವಾಟ್ಸ್ಆಪ್ ಮತ್ತು ಫೇಸ್​ಬುಕ್ ಗ್ರೂಪ್ ಗಳಲ್ಲಿ ಧಾರ್ಮಿಕ ಮತ್ತು ಕೊಮು ಭಾವನೆಗಳಿಗೆ ಧಕ್ಕೆ ತರುವಂತಹ ಸಮಾಜದಲ್ಲಿ ಶಾಂತಿಯನ್ನು ಕದಡುವಂತಹ ಸಂದೇಶಗಳನ್ನು ಹರಿ ಬಿಡುತ್ತಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿ, ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ 20 ಜನರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಸಿಪಿಐ ಪ್ರದೀಪ್ ಬಿ.ಯು ಹಾಗೂ ಹೊಸ ಮಾರುಕಟ್ಟೆ ಠಾಣೆ ಪಿ.ಎಸ್.ಐ ನಾಗಪ್ಪ ಮತ್ತು ನಗರ ಠಾಣೆ ಪಿ.ಎಸ್‌ ಐ ಶಿವಾನಂದ ನಾವಡಗಿ ಅವರು ತೀವ್ರ ವಿಚಾರಣೆಗೆ ಒಳಪಡಿಸಿ, ಸಂಶಯಾಸ್ಪದ ವ್ಯಕ್ತಿಗಳ ಮೇಲೆ ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಕ್ರಮ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಕೋಮು ಸೌಹಾರ್ದತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದು, ಪ್ರಚೋದನಾಕಾರಿ ಹೇಳಿಕೆ, ಸಂದೇಶ, ವಿಡಿಯೋ ಹರಿಬಿಟ್ಟಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿರಸಿ ಉಪವಿಭಾಗದ ಡಿವೈಎಸ್‍ಪಿ ಗೋಪಾಲ ಕೃಷ್ಣ ನಾಯಕ ಎಚ್ಚರಿಸಿದ್ದಾರೆ.

- Advertisement -

Related news

error: Content is protected !!