Friday, July 24, 2026
spot_imgspot_img
spot_imgspot_img

ಉಡುಪಿ: ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ಕಾರು ಡಿಕ್ಕಿ; ಗರ್ಭಿಣಿ ಮಹಿಳೆಗೆ ಗಂಭೀರ ಗಾಯ..!

- Advertisement -
- Advertisement -

vtv vitla
vtv vitla

ಉಡುಪಿ: ತಾಲೂಕಿನ ಕಡಿಯಾಳಿ ಬಳಿ ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಫೆ.03 ರ ಗುರುವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಓರ್ವ ಗರ್ಭಿಣಿ ಎನ್ನಲಾದ ಮಹಿಳೆ ಸಹಿತ ಮೂವರು‌ ರಸ್ತೆಯ ಎಡಭಾಗದಿಂದ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಡೆಗೆ ರಸ್ತೆ ದಾಟುತ್ತಿದ್ದಾಗ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ವೇಗವಾಗಿ ಬಂದ ಇನ್ನೋವಾ ಕಾರು ಮೂವರಿಗೂ ಡಿಕ್ಕಿ‌ ಹೊಡೆದಿದೆ. ಇನ್ನೋವ ಕಾರು ಡಿಕ್ಕಿಯಾದ ರಭಸಕ್ಕೆ ಮೂವರು ರಸ್ತೆಗೆ ಬಿದ್ದಿದ್ದು, ಗರ್ಭಿಣಿ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದೆ ಎಂದು‌ ತಿಳಿದುಬಂದಿದೆ.

ತಕ್ಷಣ ಕಾರು ಚಾಲಕನೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಈ ದೃಶ್ಯಾವಳಿ ಶೋರೂಮ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

vtv vitla
vtv vitla
- Advertisement -

Related news

error: Content is protected !!