Friday, July 4, 2025
spot_imgspot_img
spot_imgspot_img

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ..!

- Advertisement -
- Advertisement -
vtv vitla
vtv vitla

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಅವರ ಚಿಕಿತ್ಸೆ ಮುಂದುವರೆದಿದೆ.

ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ವೈದ್ಯರು ಹೇಳಿದ್ದರು. ಆದರೆ ಇದೀಗ ಪುನಃ ಆರೋಗ್ಯ ಸ್ಥಿತಿ ಹದಗೆಡುತ್ತಾ ಸಾಗಿರುವುದಾಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

2019ರಲ್ಲಿ ಉಸಿರಾಟದ ತೊಂದರೆ ಅಥವಾ ಎದೆಯ ದಟ್ಟಣೆ ಶ್ವಾಸಕೋಶದ ಕಾಯಿಲೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!