Saturday, June 13, 2026
spot_imgspot_img
spot_imgspot_img

ಸಮವಸ್ತ್ರ ಸಂಘರ್ಷ! ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ ಆರಂಭ

- Advertisement -
- Advertisement -

ಸದ್ಯ ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ ಆರಂಭವಾಗಿದೆ. ಕೋರ್ಟ್​ ಯಾವ ತೀರ್ಮಾನ ಕೈಗೊಳ್ಳಲಿದೆ ಅಂತ ಇಡೀ ರಾಜ್ಯ ಕಾದು ಕುಳಿತಿದೆ. ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ.


ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದಾರೆ. ಆದರೆ ಈ ವಿವಾದದ ಬಗ್ಗೆ ಸದ್ಯ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ.

ಸದ್ಯ ವಿಚಾರಣೆ ಆರಂಭವಾಗಿದ್ದು, ಕೋರ್ಟ್​ ಯಾವ ತೀರ್ಮಾನ ಕೈಗೊಳ್ಳಲಿದೆ ಅಂತ ಇಡೀ ರಾಜ್ಯ ಕಾದು ಕುಳಿತಿದೆ. ಇನ್ನು ಸಮವಸ್ತ್ರ ವಿವಾದದ ಹಿನ್ನೆಲೆ ಬಂದ್ ಆಗಿದ್ದ ಕಾಲೇಜುಗಳು ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಪಿಯುಸಿ, ಪದವಿ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧಾರ ಮಾಡಿದೆ.

- Advertisement -

Related news

error: Content is protected !!