Monday, September 14, 2026
spot_imgspot_img
spot_imgspot_img

ನೈಜ ಘಟನೆಯಾಧಾರಿತ ಸಿನೆಮಾದಲ್ಲಿ ಬಣ್ಣ ಹಚ್ಚಿದ ಬಿ.ಎಸ್.ವೈ, ಸಚಿವ ಸುಧಾಕರ್..! ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸಪ್ತ ಪಾವೂರು

- Advertisement -
- Advertisement -

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಸ್ಯಾಂಡಲ್’ವುಡ್ ನತ್ತ ಮುಖಮಾಡಿದ್ದಾರೆ ರಾಜಾಹುಲಿ ಯಡಿಯೂರಪ್ಪ..! ಹರೀಶ್ ಎಂ.ಡಿ. ಹಳ್ಳಿ ನಿರ್ದೇಶನದ ತನುಜಾ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ.

ನೀಟ್ ಪರೀಕ್ಷೆಯನ್ನು ಬರೆಯಲಾಗದೇ ಸಂಕಷ್ಟಕ್ಕೆ ಸಿಲುಕಿದ್ದ ಯುವತಿಗೆ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಯಡಿಯೂರಪ್ಪ ನೆರವಾಗಿದ್ದರು. 350 ಕಿ.ಮೀ ದೂರದಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಇದು ಯುವತಿಗೆ ಯಾವ ರೀತಿಯಲ್ಲಿ ನೆರವಾಯಿತು ಎಂಬ ಕಥಾ ಹಂದರವನ್ನು ಸಿನಿಮೀಯಾ ಶೈಲಿಯಲ್ಲಿ ತೋರಿಸಲಾಗುತ್ತದೆ.

ಈ ಚಿತ್ರದಲ್ಲಿ ಬಿ.ಎಸ್.ವೈ ಈ ಚಿತ್ರದಲ್ಲಿ ಮುಖ್ಯಮಂತ್ರಿಯ ಪಾತ್ರ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಬಿಎಸ್‌ವೈ ಭಾಗದ ಶೂಟಿಂಗ್ ಪೂರ್ಣಗೊಂಡಿರುವುದಾಗಿ ಸ್ವತಃ ನಿರ್ದೇಶಕರೇ ಮಾಹಿತಿ ಬಿಚ್ಚಿಟ್ಟಿದ್ದಾರೆ. ಇದುವರೆಗೂ ಶೇ. 90 ರಷ್ಟು ಚಿತ್ರೀಕರಣ ಮುಗಿದಿದೆ. ಮುಂಬರುವ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಪ್ಲಾನ್ ಮಾಡಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಕಾಸಾರಗೋಡು ಚಿತ್ರದಲ್ಲಿ ಮಿಂಚಿದ ಬಾಲ ಪ್ರತಿಭೆ ಸಪ್ತ ಪಾವೂರು ತನುಜಾ ಸಿನೆಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸಚಿವ ಡಾ ಸುಧಾಕರ್ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

- Advertisement -

Related news

error: Content is protected !!