Wednesday, July 22, 2026
spot_imgspot_img
spot_imgspot_img

ಕಡಬ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

- Advertisement -
- Advertisement -

ಕಡಬ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರ ಮೃತದೇಹವು ಕಡಬ ಪೇಟೆಯ ಸಮುದಾಯ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ದಾಮ್ರೋಡಿ ನಿವಾಸಿ ಕುಮಾರ್(48) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕುಮಾರ್ ವಿಪರೀತ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ.

ಇದರಿಂದಾಗಿ ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!