Saturday, June 28, 2025
spot_imgspot_img
spot_imgspot_img

ಮಂಗಳೂರು: ‘ ನಮ್ಮವರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ದ.ಕ ಜಿಲ್ಲಾಧಿಕಾರಿ ಮನವಿ

- Advertisement -
- Advertisement -

ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು‌ ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ.

ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ‌ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ​ ಆರಂಭಿಸಿದೆ.ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: [email protected] ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.

ಮಂಗಳೂರು: ಉಕ್ರೇನ್‌ನಲ್ಲಿ ಸಿಲುಕಿರುವ ಕರಾವಳಿ ಮೂಲದ ಇಬ್ಬರು ವಿದ್ಯಾರ್ಥಿಗಳು

ಇನ್ನು ಮಂಗಳೂರಿ‌ನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್‌ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ‌ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಉಕ್ರೇನ್‌ ನಲ್ಲಿ ಸಿಲುಕಿರುವ ಮತ್ತೋರ್ವ ಮಂಗಳೂರು ಪಡೀಲು ನಿವಾಸಿ ಕ್ಲಾಟನ್ ಅವರು ಸದ್ಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ.

- Advertisement -

Related news

error: Content is protected !!