- Advertisement -
- Advertisement -
ರಷ್ಯಾ ಉಕ್ರೇನ್ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಉಕ್ರೇನ್ನ ಖಾರ್ಕೀವ್ನಲ್ಲಿ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ, ಭಾರತೀಯ ವಿದ್ಯಾರ್ಥಿಯೊರ್ವ ಖಾರ್ಕೀವ್ನಲ್ಲಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ ಎಂದು ಹೇಳಿದೆ.
ಮೃತ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂದು ಗುರುತಿಸಲಾಗಿದೆ.
- Advertisement -