- Advertisement -
- Advertisement -
ನವದೆಹಲಿ: ಸಂಸತ್ ಭವನದ ಹೆಚ್ಚುವರಿ ಕಟ್ಟಡದ 6ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಸುಮಾರು 7 ಅಗ್ನಿಶಾಮಕ ವಾಹನದಲ್ಲಿ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -