Tuesday, July 1, 2025
spot_imgspot_img
spot_imgspot_img

ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಳೆದು ಪರಾರಿಯಾದ ಅಪರಿಚಿತ ವ್ಯಕ್ತಿಗಳು..!

- Advertisement -
- Advertisement -

ಬಂಟ್ವಾಳ: ಅಪರಿಚಿತ ವ್ಯಕ್ತಿಗಳು ಬೈಕ್ ನಲ್ಲಿ ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಎಳೆದುಕೊಂಡು ಪರಾರಿಯಾದ ಘಟನೆ ಬಿ.ಸಿ ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಇಂದು ನಡೆದಿದೆ.

ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

vtv vitla
vtv vitla

ಕೈಕುಂಜೆ ಪೂರ್ವ ಬಡಾವಣೆ ನಿವಾಸಿ ಸುಲೋಚನಾ ಎಂಬವರು ಕೈಕುಂಜೆಯಲ್ಲಿರುವ ಭಾರತಿ ಎಂಬವರ ಮನೆಗೆ ಹೋಗಿ ಹೊಲಿಯಲು ಕೊಟ್ಟ ಬಟ್ಟೆಯನ್ನು ಪಡೆದುಕೊಂಡು ವಾಪಸ್ ಬರುತ್ತಿರುವ ವೇಳೆ ಬಡಾವಣೆ ರಸ್ತೆಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ಮೇಲೆ ಬಂದಿದ್ದು, ಹಿಂಬದಿ ಸವಾರ ಸುಲೋಚನಾರವರ ಕುತ್ತಿಗೆಯಲ್ಲಿದ್ದ ಅಂದಾಜು 1 ಲಕ್ಷ ರೂ ಮೌಲ್ಯದ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿದ್ದಾರೆ.

ಈ ಕುರಿತು ಸುಲೋಚನಾರವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಸರ್ಕಲ್ ಇನ್ಸ್ಪೆಕ್ಟರ್ ವಿವೇಕಾನಂದ ಮತ್ತವರ ತಂಡ ಕಾರ್ಯಾಚರಣೆ ನಡೆಸಲು ಆರಂಭಿಸಿದೆ.

vtv vitla
vtv vitla
- Advertisement -

Related news

error: Content is protected !!