Monday, August 31, 2026
spot_imgspot_img
spot_imgspot_img

ಆರೆಸ್ಸೆಸ್ ಕಾರ್ಯಕರ್ತ ಫಾಲ್ಸ್ ನಲ್ಲಿ ಮುಳುಗಿ ದಾರುಣ ಸಾವು

- Advertisement -
- Advertisement -

ಕಾರವಾರ: ಆರೆಸ್ಸೆಸ್ ಕಾರ್ಯಕರ್ತರೊಬ್ಬರು ಫಾಲ್ಸ್ ನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್ ನಲ್ಲಿ ನಡೆದಿದೆ.

ತುಮಕೂರು ಮೂಲದ 35 ವರ್ಷ ವಯಸ್ಸಿನ ನವೀನ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

vtv vitla
vtv vitla

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್ ಗೆ ಸುಮಾರು 50 ಜನರೊಂದಿಗೆ ನವೀನ್ ಬಂದಿದ್ದರು ಎನ್ನಲಾಗಿದೆ. ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಶಿರಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

vtv vitla
vtv vitla
- Advertisement -

Related news

error: Content is protected !!