Wednesday, April 23, 2025
spot_imgspot_img
spot_imgspot_img

ಫ್ಲೈ ಓವರ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‍ ಲಾರಿ; ಬೆಂಕಿ ಹೊತ್ತಿ ಚಾಲಕ ಸಜೀವ ದಹನ

- Advertisement -
- Advertisement -

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಡುವೆ ಇರುವ ಫ್ಲೈ ಓವರ್​ನ ಪಿಲ್ಲರ್​ಗೆ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಸುಟ್ಟು ಕರಕಲಾದ ಘಟನೆ ಮಂಡ್ಯದ ಮದ್ದೂರು ಪಟ್ಟಣದ ಎಲ್.ಐ.ಸಿ ಕಛೇರಿಯ ಮುಂಭಾಗದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

ಬಿಡದಿಯಿಂದ ಮೈಸೂರಿಗೆ ಜಲ್ಲಿ ತುಂಬಿಕೊಂಡು ಟಿಪ್ಪರ್​ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಫ್ಲೈ ಓವರ್​ ಪಿಲ್ಲರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾಗಿದೆ. ಇದರಿಂದ ಚಾಲಕ ವಾಹನದೊಳಗೆ ಸಿಲುಕಿ ಹೊರಬರಲಾಗದೇ ಟಿಪ್ಪರ್​ನಲ್ಲೇ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಚಾಲಕನ ಶವವನ್ನು ಹೊರ ತೆಗೆದಿದ್ದಾರೆ.

- Advertisement -

Related news

error: Content is protected !!