- Advertisement -
- Advertisement -



ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆದಿತ್ಯರಾವ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರ ಜೊತೆ 10 ಸಾವಿರ ರೂ. ದಂಡವನ್ನೂ ಸಹ ನ್ಯಾಯಾಲಯ ವಿಧಿಸಿದೆ.
ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. 2020ರ ಜನವರಿ 20ರಂದು ಬೆಳಗ್ಗೆ ರಿಕ್ಷಾವೊಂದರಲ್ಲಿ ಚಾಲಕ ಸೇರಿದಂತೆ ಇಬ್ಬರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆ ಪೈಕಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿ ಇರಿಸಿ ಓಡಿದ್ದ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.


- Advertisement -








