Friday, September 4, 2026
spot_imgspot_img
spot_imgspot_img

ಕೊಣಾಜೆ: 16 ವರ್ಷದ ಬಾಲಕ ರಹಿಮಾನ್ ನಿಗೂಢ ನಾಪತ್ತೆ

- Advertisement -
- Advertisement -

ಕೊಣಾಜೆ: ಬಾಲಕನೋರ್ವ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿರುವ ಬಾಲಕನನ್ನು ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ಎನ್ನಲಾಗಿದೆ.

ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಾಲಕ ಬುಧವಾರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನ ನಾಪತ್ತೆಯಿಂದ ಕುಟುಂಬಸ್ಥರಲ್ಲಿ ಆತಂಕ ಮೂಡಿದೆ.

- Advertisement -

Related news

error: Content is protected !!