Sunday, June 29, 2025
spot_imgspot_img
spot_imgspot_img

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ; 36 ಲಕ್ಷದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

- Advertisement -
- Advertisement -

ಮಂಗಳೂರು: ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ದುಬೈಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ರೂ.36.53,550 ಮೌಲ್ಯದ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ಆತನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿ ತನ್ನ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ 24 ಕ್ಯಾರೆಟ್‌ನ 706 ಗ್ರಾಂ ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕಸ್ಟಮ್ಸ್ ಮಂಗಳೂರು ಟ್ವೀಟ್ ಮಾಡಿದೆ.

- Advertisement -

Related news

error: Content is protected !!