Sunday, September 20, 2026
spot_imgspot_img
spot_imgspot_img

ಪುತ್ತೂರು: ದ.ಕ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಎಸ್.ಬಿ.ಜಯರಾಮ ರೈ ಆಯ್ಕೆ

- Advertisement -
- Advertisement -
vtv vitla
vtv vitla

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕುಂದಾಪುರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ. ಜಯರಾಮ ರೈಯವರನ್ನು ಉಪಾಧ್ಯಕ್ಷರಾಗಿ ಒಮ್ಮತದಿಂದ ಆಯ್ಕೆಮಾಡಲಾಗಿದೆ.

ಮಂಗಳೂರು ಕುಲಶೇಖರದಲ್ಲಿರುವ ಕೆಎಂಎಫ್ ಕಛೇರಿಯಲ್ಲಿ ಮಾ. 23ರಂದು ಚುನಾವಣಾ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕರುಗಳು ಉಪಸ್ಥಿತರಿದ್ದರು. ಚುನಾವಣಾಧಿಕಾರಿಯಾಗಿದ್ದ ಸಚಿನ್ ಕುಮಾರ್‍ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

- Advertisement -

Related news

error: Content is protected !!