Monday, August 31, 2026
spot_imgspot_img
spot_imgspot_img

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದ ಶಿಕ್ಷಕಿ ಆತ್ಮಹತ್ಯೆ

- Advertisement -
- Advertisement -

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಊಡಗಿ(36) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಐದು ವರ್ಷದ ಹಿಂದೆ ದಿಗ್ಗಾಂವ್ ಗ್ರಾಮದ ನಿವಾಸಿ ಶರಣ ಬಸಪ್ಪ ಎಂಬುವರೊಂದಿಗೆ ವಿವಾಹವಾಗಿದ್ದ ಭೂಮಿಕಾ, ದಿಗ್ಗಾಂವ್ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಬೆಳಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ. ಅತ್ತ ಶಾಲೆಗೂ ಹೋಗದೆ ಇತ್ತ ಮನೆಗೂ ಬಾರದಿದ್ದಾಗ ಆತಂಕಗೊಂಡ ಮನೆಯವರು ಹುಡುಕಲಾರಂಬಿಸಿದ್ದಾರೆ. ಈ ವೇಳೆ ಬಾವಿಯ ಬಳಿ ಭೂಮಿಕಾ ಚಪ್ಪಲಿ ಸಿಕ್ಕು ಅನುಮಾನಗೊಂಡು ಬಾವಿಯಲ್ಲಿ ಹುಡುಕಿದಾಗ ಶವ ಪತ್ತೆಯಾಗಿದೆ. ಮದುವೆಯಾಗಿ ಐದು ವರ್ಷ ಕಳೆದರೂ ಸಹ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ‌. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!