Wednesday, June 24, 2026
spot_imgspot_img
spot_imgspot_img

ಏ.1 ರಂದು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ‘ಪರೀಕ್ಷಾ ಪೇ ಚರ್ಚಾ’

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಏ.1 ರಂದು ಮಕ್ಕಳೊಂದಿಗೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದಾರೆ. ಇದು 5ನೇ ಆವೃತ್ತಿಯಾಗಿದ್ದು, ವಿಶ್ವಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪರೀಕ್ಷೆಯ ಒತ್ತಡ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ರಾಜ್ಯಪಾಲರ ಸಮ್ಮುಖದಲ್ಲಿ ಕಾರ್ಯಕ್ರಮ ವೀಕ್ಷಿಸಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ದ ವಿದ್ಯಾರ್ಥಿಗಳು ಆಯಾ ರಾಜ್ಯಗಳ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎಕ್ಸಾಮ್ ವಾರಿಯರ್ಸ್ ಎಂಬ ಬೃಹತ್ ಆಂದೋಲನದ ಭಾಗವಾಗಿ ಪರೀಕ್ಷಾ ಪೇ ಚರ್ಚಾ ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

vtv vitla
vtv vitla

ಒತ್ತಡ ರಹಿತ ವಾತಾವರಣ, ಮಕ್ಕಳ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಪ್ರೋತ್ಸಾಹ ಮತ್ತು ವಿದ್ಯಾರ್ಥಿ, ಶಿಕ್ಷಕ, ಪೋಷಕ ಹಾಗೂ ಸಮಾಜವನ್ನು ಒಗ್ಗೂಡಿಸುವ ಆಶಯದೊಂದಿಗೆ ಪರೀಕ್ಷಾ ಪೇ ಚರ್ಚಾ ನಡೆಯುತ್ತಿದೆ. ನವದೆಹಲಿಯಲ್ಲಿ ಟಾಲ್ಕಟೋರಾ ಕ್ರೀಡಾಂಗಣದಿಂದ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ದೂರದರ್ಶನ (ಡಿಡಿ ನ್ಯಾಷನಲ್,, ಡಿಡಿ ನ್ಯೂಸ್, ಡಿಡಿ ಇಂಡಿಯಾ), ರೇಡಿಯೊ, ಟಿವಿ ವಾಹಿನಿಗಳು, ಎಡುಮಿನೋಫ್ ಇಂಡಿಯಾದ ಯೂಟ್ಯೂಬ್ ಚಾನೆಲ್ ಗಳು, ನರೇಂದ್ರಮೋದಿ, ಪಿಎಂಒ ಇಂಡಿಯಾ, ಪಿಬಿಂಡಿಯಾ, ಮೈಗೋವಿಂಡಿಯಾ, ರಾಜ್ಯಸಭಾ ಟಿವಿ, ಸ್ವಯಂ ಸೇರಿದಂತೆ ಡಿಜಿಟಲ್ ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದೆ ಎಂದವರು ಇದೇ ವೇಳೆ ಮಾಹಿತಿ ನೀಡಿದರು.

vtv vitla
vtv vitla
- Advertisement -

Related news

error: Content is protected !!