- Advertisement -
- Advertisement -


ಬೆಂಗಳೂರು: ನಗರದ ಪ್ರತಿಷ್ಠಿತ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಹಾಕಲಾಗಿದೆ. ಇದರಿಂದಾಗಿ ಶಾಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಬೆಂಗಳೂರಿನ ನಾಲ್ಕು ಶಾಲೆಗಳಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಒಡ್ಡಲಾಗಿದೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಬಾಂಬ್ ಬೆದರಿಕೆಯ ಇ-ಮೇಲ್ ನಿಂದಾಗಿ ಶಾಲೆಗಳಿಗೆ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ಸೇರಿದಂತೆ ವಿವಿಧ ತಂಡವು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.


- Advertisement -








