Friday, June 27, 2025
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 8642 ಮಂದಿಗೆ ಸೋಂಕು..!* ದಕ್ಷಿಣ ಕನ್ನಡದಲ್ಲಿ 234 , ಉಡುಪಿ 375 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 126  ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7201 ಮಂದಿ ಕೊರೊನಾ ದಿಂದ ಚೇತರಿಸಿಕೊಂಡು,ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. ಹಾಗೇ 8642 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ 126 ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 2,49,590ಕ್ಕೆ ಏರಿಕೆಯಾಗಿದ್ದು, ಚೇತರಿಸಿಕೊಂಡವರು 1,64,150 ಮಂದಿ. ಮೃತಪಟ್ಟವರು 4327 ಸೋಂಕಿತರು ಹಾಗೂ ಸಕ್ರಿಯ ಪ್ರಕರಣಗಳು 81,097 ಆಗಿದೆ.

ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2804 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 56 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2549 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 33280 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 234 ಮಂದಿಗೆ ಸೋಂಕು ತಗುಲಿದೆ. 4 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 115 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9535 ಆಗಿದ್ದು, ಇಲ್ಲಿಯವರೆಗೆ 6933 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2303 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 375 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 9038 ಆಗಿದ್ದು ,ಇಲ್ಲಿಯವರೆಗೆ 6011 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2947 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!