Wednesday, September 23, 2026
spot_imgspot_img
spot_imgspot_img

ಕಟೀಲು ಮೇಳದ ಪ್ರಧಾನ ಭಾಗವತ, ಬಲಿಪ ಪರಂಪರೆಯ ಕೊಂಡಿ ಪ್ರಸಾದ ಬಲಿಪ ವಿಧಿವಶ

- Advertisement -
- Advertisement -

ಕಟೀಲು ಮೇಳದ ಪ್ರಧಾನ ಭಾಗವತ, ಬಲಿಪ ಪರಂಪರೆಯ ಕೊಂಡಿ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.

vtv vitla
vtv vitla


ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಈ ಬಾರಿ ಮೇಳದ ತಿರುಗಾಟದಲ್ಲಿ ಇರಲಿಲ್ಲ. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!