Friday, September 4, 2026
spot_imgspot_img
spot_imgspot_img

ಉಡುಪಿ: ಹುಟ್ಟೂರು ತಲುಪಿದ ಸಂತೋಷ್ ಪಾಟೀಲ್ ಪಾರ್ಥಿವ ಶರೀರ

- Advertisement -
- Advertisement -

ಉಡುಪಿ: ಶಾಂಭವಿ ಲಾಡ್ಜ್ ಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ ಎಂದು ಹಠ ಹಿಡಿದ ಕುಟುಂಬಸ್ಥರಿಗೆ ಪೊಲೀಸ್ ಅಧಿಕಾರಿಗಳ ತಂಡವು ಮನವೊಲಿಕೆ ಮಾಡಿದೆ.

ಮರಣೋತ್ತರ ಪರೀಕ್ಷೆ ವಿಳಂಬವಾದರೆ ಪುಮುಖ ಸಾಕ್ಷ್ಯಗಳನ್ನು ದುರ್ಬಲಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂತೋಷ್ ಪಾಟೀಲ್ ಮೃತದೇಹವನ್ನು ಮಣಿಪಾಲ ಫಾರನ್ಸಿಕ್ ಮೆಡಿಸಿನ್ ವಿಭಾಗದಲ್ಲಿ ಹಸ್ತಾಂತರ ಮಾಡಲಾಯಿತು. ಬಳಿಕ ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಬೆಳಗಾವಿಯ ಬಡಸ ಗ್ರಾಮಕ್ಕೆ ರವಾನೆ ಮಾಡಲಾಗಿತ್ತು.

- Advertisement -

Related news

error: Content is protected !!