Sunday, September 20, 2026
spot_imgspot_img
spot_imgspot_img

ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು;ಜ್ಯೋತಿಷಿ ಸೇರಿ ಮೂವರಿಗೆ ಗಾಯ

- Advertisement -
- Advertisement -

ಅರಂತೋಡು: ಮುಖ್ಯರಸ್ತೆಯ ಸೇತುವೆಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಗುರುವಾರ ತಡರಾತ್ರಿ ನಡೆದಿದೆ.

ಜ್ಯೋತಿಷಿ ಗುರುರಾಜ್ ಮತ್ತು ಸಂಪಾಜೆಯ ಪ್ರೇಮ್ ಗಾಯಗೊಂಡಿದ್ದಾರೆ. ಕಾರು ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳು ಗುರುರಾಜ್ ಮತ್ತು ಪ್ರೇಮ್ ಕುಮಾರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಚಾಲಕನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!