Tuesday, July 1, 2025
spot_imgspot_img
spot_imgspot_img

ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತ; ಗಾಯಾಳು ಮೃತ್ಯು

- Advertisement -
- Advertisement -

ಮಂಗಳೂರು : ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ. 9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಬಿಎಂಡಬ್ಲ್ಯು ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಬಿಎಂಡಬ್ಲ್ಯು ಕಾರು ಚಲಾಯಿಸುತ್ತಿದ್ದ ನಗರದ ಮಣ್ಣಗುಡ್ಡ ನಿವಾಸಿ ಇಂಟೀರಿಯರ್ ಡೆಕೊರೇಟರ್ ಶ್ರವಣ್ ಕುಮಾರ್‌ ಎಂಬಾತ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ದಾಟಿ ಸ್ಕೂಟರ್ ಮತ್ತು ಕಾರಿಗೆ ಢಿಕ್ಕಿ ಹೊಡೆದಿತ್ತು.

ಈ ಅಪಘಾತದಿಂದ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಪ್ರೀತಿ ಮನೋಜ್ ಮತ್ತು ಕಾರಿನಲ್ಲಿದ್ದ ಬಾಲಕ ಅಮಯ್ ಜಯದೇವನ್ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪ್ರೀತಿ ಮನೋಜ್ ಮೃತಪಟ್ಟಿದ್ದಾರೆ.ಆರೋಪಿ ಕಾರು ಚಾಲಕನಿಗೆ ಸಾರ್ವಜನಿಕರು ಹಲ್ಲೆಗೈದಿದ್ದರು. ಅಪಘಾತದ ಮತ್ತು ‌ಹಲ್ಲೆಗೈದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಮೃತ ಮಹಿಳೆಯ ಅಂಗಾಂಗ ದಾನ ಮಾಡಲು ‌ಕುಟುಂಬಸ್ಥರು‌ ನಿರ್ಧರಿಸಿದ್ದು, ಅದರ ಪ್ರಕ್ರಿಯೆಯು ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!