Tuesday, September 8, 2026
spot_imgspot_img
spot_imgspot_img

ಸಿಇಟಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

- Advertisement -
- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಗ್ಗೆ ಮಲ್ಲೇಶ್ವರಂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೊರೊನಾ ಭೀತಿ ನಡುವೆಯೂ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತಮ ಫಲಿತಾಂಶ ಪಡೆದಿದ್ದಾರೆ ಎಂದು ಹೇಳಿದ್ರು.
ವಿದ್ಯಾರ್ಥಿಗಳು ಫಲಿತಾಂಶ ನೋಡಲು karresults.nic.in ಈ ಲಿಂಕ್ ಮೂಲಕ ಚೆಕ್ ಮಾಡಬಹುದು ಎಂದು ತಿಳಿಸಿದ್ದಾರೆ.

ಇಂಜಿನಿಯರಿಂಗ್ ನಲ್ಲಿ ಬೆಂಗಳೂರಿನ ಆರ್ ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಬೆಂಗಳೂರಿನ ಶ್ರೀಚೈತನ್ಯ ಟೆಕ್ನೋ ಸ್ಕೂಲ್ ವಿದ್ಯಾರ್ಥಿ ಶುಭಾನ್ ಆರ್.ಸೆಕೆಂಡ್ ರ್ಯಾಂಕ್ ಗಳಿಸಿದ್ದಾರೆ. ಮೂರನೇ ಸ್ಥಾನವನ್ನು ಹುಬ್ಬಳಿಯ ಬೇಸ್ ಪಿಯು ಕಾಲೇಜು ವಿದ್ಯಾರ್ಥಿ ಪಡೆದುಕೊಂಡಿದ್ದಾರೆ.


ಈ ಬಾರಿ ಒಟ್ಟು 1,84,368 ಜನರು ಪರೀಕ್ಷೆ ಬರೆಯಲು ಕುಳಿತಿದ್ದರು. ಈ ಪೈಕಿ 1800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.

- Advertisement -

Related news

error: Content is protected !!