Tuesday, September 22, 2026
spot_imgspot_img
spot_imgspot_img

ಸುಳ್ಯ: ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಸುಳ್ಯ : ನೇಣು ಬಿಗಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಸುಳ್ಯ ಗಾಂಧಿನಗರ ಕೆರೆಮೂಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿವಿದ್ದ ಆಮಿನಾ ಎಂಬವರ ಪುತ್ರಿ ಆಯಿಶಾ (20) ಮೃತ ಯುವತಿ ಎಂದು ತಿಳಿದುಬಂದಿದೆ.

ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವುದಾಗಿ ತಿಳಿಸಿದರೆನ್ನಲಾಗಿದೆ.

ಆಯಿಶಾರನ್ನು ಕಳೆದ ವರ್ಷ ಕಾಸರಗೋಡು ಮೂಲದ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿದ್ದು, ಪತಿ ವಿದೇಶದಲ್ಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!