Thursday, September 3, 2026
spot_imgspot_img
spot_imgspot_img

ಮಂಗಳೂರು: ಕಾರು ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ರಮೇಶ್ ಕುಮಾರ್ ಮೃತ ದುರ್ದೈವಿ.

ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕುಮಾರ್ ಅವರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದದಾಸ ವೃತ್ತದ ಬಳಿ ರಾ.ಹೆದ್ದಾರಿಯಿಂದ ಮಹಾಲಿಂಗೇಶ್ವರ ಶಾಲೆಯ ಬಳಿ ತನ್ನ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆ ದರ್ಶನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಕಾರು ಚಾಲಕ ಅಜಾಗರೂಕತೆ ಮತ್ತು ಅಪಾಯಕಾರಿಯಾಗಿ ಕಾರು ಚಲಾಯಿಸುತ್ತಿದ್ದ ಪರಿಣಾಮ ರಮೇಶ್ ಅವರು ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟ ರಮೇಶ್ ಅವರನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆ ಗೆ ದಾಖಲಿಸಿದರಾದರು ಪ್ರಯೋಜನವಾಗದೆ ಮೃತ ಪಟ್ಟಿದ್ದಾರೆ.

ಈ ಸಂಬಂಧ ರೋಶನ್ ಪ್ರಸಾದ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಸಂಚಾರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!