Wednesday, September 9, 2026
spot_imgspot_img
spot_imgspot_img

ಉಡುಪಿ: ಉದ್ಯೋಗ ಸಿಗದ ಚಿಂತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

- Advertisement -
- Advertisement -

ಶಿರ್ವ ಉದ್ಯೋಗ ಸಿಗದ ಚಿಂತೆಯಲ್ಲಿ ಎಂಬಿಎ ವಿದ್ಯಾಭ್ಯಾಸ ಮಾಡಿದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಶಿರ್ವ ಗ್ರಾಮದ ಎಡ್ಕರು ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ಸಹನಾ (23) ಎಂದು ಗುರುತಿಸಲಾಗಿದೆ.

ಇವರು ಒಂದೂವರೆ ವರ್ಷದ ಹಿಂದೆ ಮಂಗಳೂರಿನ ಕಾಲೇಜಿನಲ್ಲಿ ಎಂಬಿಎ ವಿದ್ಯಾಭ್ಯಾಸ ಮುಗಿಸಿದ್ದು, ಆಕೆಗೆ ಯಾವುದೇ ಉದ್ಯೋಗ ದೊರಕಿರಲಿಲ್ಲ. ಇದೇ ಚಿಂತೆಯಲ್ಲಿ ಎ.30ರಂದು ಎಡ್ಕರುವಿನಲ್ಲಿರುವ ತನ್ನ ಅಕ್ಕನ ಮನೆಗೆ ಬಂದು ಮೇ 1ರಂದು ಬೆಳಗಿನ ಜಾವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮೇ 9ರಂದು ಬೆಳಗ್ಗೆ, ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!