Saturday, September 12, 2026
spot_imgspot_img
spot_imgspot_img

ಬಂಟ್ವಾಳ ತಾಲೂಕು ತಹಶೀಲ್ದಾರ್ ಆಗಿ‌ ಡಾ.ಸ್ಮಿತಾ ರಾಮು ನೇಮಕ..!

- Advertisement -
- Advertisement -

ಬಂಟ್ವಾಳ: ತಾಲೂಕಿನ ತಹಶೀಲ್ದಾರ್ ಆಗಿ ಡಾ.ಸ್ಮಿತಾ ರಾಮು ನೇಮಕವಾಗಿದ್ದಾರೆ. ಇವರು ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿದ್ದಾರೆ.

ಈ ಹಿಂದೆ ರಶ್ಮಿ ಎಸ್.ಆರ್.ಅವರು ಬಂಟ್ವಾಳ ತಹಶೀಲ್ದಾರ್ ಆಗಿದ್ದು, ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆ ಮಾಡಿದ ಬಳಿಕ ಬಂಟ್ವಾಳ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಡಾ| ಸ್ಮಿತಾ ಅವರು ಮೂಲತಃ ದಂತ ವೈದ್ಯೆಯಾಗಿದ್ದಾರೆ.

ಮಂಗಳೂರಿನ ಏನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ಬಳಿಕ ಸುಮಾರು 14 ವರ್ಷಗಳ ಕಾಲ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿದ್ದರು.

- Advertisement -

Related news

error: Content is protected !!