Tuesday, September 22, 2026
spot_imgspot_img
spot_imgspot_img

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮವಾದ ಕಾರು

- Advertisement -
- Advertisement -
vtv vitla

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರೊಂದು ಸುಟ್ಟು ಭಸ್ಮವಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದ ಪಟ್ರಮೆ ನಿವಾಸಿ ಕಾರು ಮಾಲಕ ಆನಂದ ಗೌಡ ಹಾಗೂ ಮಗು ಸಹಿತ ನಾಲ್ವರು ತಕ್ಷಣ ಕಾರಿನಿಂದ ಇಳಿದು ಬಚಾವ್ ಆಗಿದ್ದು ಒಬ್ಬರಿಗೆ ಮಾತ್ರ ಸಣ್ಣ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ.

ಅನಂದ ಗೌಡ ಎಂಬವರು ತನ್ನ ಫ್ಯಾಮಿಲಿ ಜೊತೆ ಸಂಬಂಧಿಕರ ಮನೆಗೆ ಕಾರಿನಲ್ಲಿ ಹೊರಟಿದ್ದರು. ಆದರೆ ಅಚಾನಕ್ ಆಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಇಳಿಯುತ್ತಿದ್ದಂತೆ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಪುತ್ತೂರು ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದರಾದರೂ ಅಷ್ಟರಲ್ಲೇ ಕಾರು ಸುಟ್ಟು ಬೂದಿಯಾಗಿತ್ತು.

- Advertisement -

Related news

error: Content is protected !!