Friday, June 5, 2026
spot_imgspot_img
spot_imgspot_img

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿ ಸೇರ್ಪಡೆ

- Advertisement -
- Advertisement -

ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಕೇಸರಿ ಪಡೆ ಸೇರಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಈ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಮಾಹಿತಿ ನೀಡಿದ್ದು, “ಬಿಜೆಪಿ ರಾಷ್ಟ್ರೀಯತಾವಾದಿ ಪಕ್ಷ . ನಾನು ರಾಷ್ಟ್ರಭಕ್ತ. ಹೀಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ. ಇದರಿಂದ ತಮಿಳುನಾಡಿನ ಬಿಜೆಪಿಗೆ ಹೊಸ ದೃಷ್ಟಿ ಮತ್ತು ನಿರ್ದೇಶನ ನೀಡಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಇನ್ನು ಅಣ್ಣಾಮಲೈ ಬಿಜೆಪಿ ಸೇರ್ಪೆಡೆ ಬಗ್ಗೆ ಸಚಿವ ಡಾ.ಸುಧಾಕರ್ ಕೂಡ ಟ್ವೀಟ್ ಮಾಡಿದ್ದು, ಅವರಿಗೆ ಹೃದಯಪೂರ್ವಕ ಸ್ವಾಗತ ಎಂದಿದ್ದಾರೆ.

- Advertisement -

Related news

error: Content is protected !!