Saturday, July 5, 2025
spot_imgspot_img
spot_imgspot_img

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು: ದೇಶದ ಸಂವಿಧಾನ ಹಾಗೂ ಕಾನೂನು ಗೌರವಿಸಬೇಕು; ಕೆ.ಎಸ್ ಈಶ್ವರಪ್ಪ

- Advertisement -
- Advertisement -

ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪರವರು ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹಿಜಾಬ್ ಈಗ ಮುಗಿದ ಅಧ್ಯಾಯ. ನ್ಯಾಯಾಲಯ ಈಗಾಗಲೇ ಸ್ಪಷ್ಠೀಕರಣ ನೀಡಿದೆ. ಕೆಲವು ರಾಷ್ಟ್ರದ್ರೋಹಿ ಶಕ್ತಿಗಳ ಚಿತಾವಣೆಯಿಂದ ಈ ರೀತಿಯ ವರ್ತನೆಗಳು ಪುನರಾವರ್ತನೆಯಾಗುತ್ತಿವೆ ಎಂದರು.

ಮುಸಲ್ಮಾನರು ಭಾರತೀಯ ಸಂಸ್ಕೃತಿಗೆ ಹೊಂದಾಣಿಕೆ ಮಾಡಿಕೊಂಡು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಈ ದೇಶದಲ್ಲಿರಬೇಕಾದರೆ ದೇಶದ ಸಂವಿಧಾನ ಮತ್ತು ಕಾನೂನನ್ನು ಗೌರವಿಸಬೇಕು. ಈ ವಿದ್ಯಾರ್ಥಿಗಳ ಹಿಂದಿರುವ ರಾಷ್ಟ್ರದ್ರೋಹಿ ಶಕ್ತಿಗಳನ್ನು ಹೆಕ್ಕಿ ತೆಗೆಯುವ ಕೆಲಸ ಸರ್ಕಾರ ಮಾಡುತ್ತಿದೆ. ವಿದ್ಯಾರ್ಥಿಗಳು ರಾಷ್ಟ್ರದ ಸತ್ಪ್ರಜೆಗಳಾಗಿ ವಿದ್ಯಾಭ್ಯಾಸದ ಕಡೆಗೆ ಗಮನಕೊಡಬೇಕು ಎಂದರು.

ಕೋರ್ಟ್ ಆದೇಶ ಉಲ್ಲಂಘಿಸಿದ ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಪ್ರಶ್ನೆ ಇಲ್ಲ. ಆದರೆ, ಅವರ ಹಿಂದಿರುವ ಶಕ್ತಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

vtv vitla
- Advertisement -

Related news

error: Content is protected !!