Sunday, June 21, 2026
spot_imgspot_img
spot_imgspot_img

ನಾಡಗೀತೆಗೆ ಅವಮಾನ ಮಾಡಿದ ಆರೋಪ ; ರೋಹಿತ್ ಚಕ್ರತೀರ್ಥ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರು: ನಾಡಗೀತೆಗೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ಎಂಬುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಿಸಿದ್ದಾರೆ.

ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದಂತಹ ವ್ಯಕ್ತಿ, ಭಾರತವನ್ನು ಅರಬ್ ಗೆ ಹೋಲಿಸಿದ ವ್ಯಕ್ತಿ. ಇಂಥವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ಸರಿಯಲ್ಲ. ಹೀಗಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಟಿ.ನಾಗಣ್ಣ ಎಂಬುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!