Friday, July 24, 2026
spot_imgspot_img
spot_imgspot_img

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಗೆ

- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಪಠ್ಯಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು . ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು.ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2 ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆಗೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು . ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೂನ್ 3ರಂದು ವಿಸರ್ಜಿಸಿದ್ದರು.

- Advertisement -

Related news

error: Content is protected !!