- Advertisement -
- Advertisement -


ಬೆಳ್ಳಾರೆ: ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಲಕ್ಸಿ ಮೊಬೈಲ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ರೆಡ್ಡಿ ಆಂಡ್ರಾಯ್ಡ್ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.
ಮೊಬೈಲ್ ಶಾಪ್ ಗೆ ಮಹಿಳೆಯೋರ್ವರು ಬಂದು ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ರೆಡ್ಮಿ ಮೊಬೈಲ್ ನೀಡಿದ್ದರು. ಇದು ಆಕಸ್ಮಿಕವಾಗಿ ಸ್ಫೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಂಗಡಿ ಮಾಲಕ ಮೊಬೈಲ್ ನ ಬ್ಯಾಟರಿ ಸಮಸ್ಯೆಯಿಂದಾಗಿ ಮೊಬೈಲ್ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.


- Advertisement -