- Advertisement -
- Advertisement -


ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ ಶಾಸಕ ಶ್ರೀನಿವಾಸ್ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಂಶುಪಾಲರು ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಹಾಗೂ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಪ್ರಿನ್ಸಿಪಾಲ್ ಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಶಾಸಕರ ದರ್ಪ, ದುರಹಂಕಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಿನ್ಸಿಪಾಲ್ ನಾಗಾನಂದ್ ಮಾತನಾಡಿ ತಪ್ಪು ಮಾಡದೇ ಹೊಡೆಸಿಕೊಂಡೆ. ಯಾಕಾದ್ರೂ ಈ ಕೆಲಸಕ್ಕೆ ಸೇರಿಕೊಂಡೆ ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.
- ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿತ – ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ
- ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ; ರವಿ ಶೆಟ್ಟಿ ಅಶೋಕನಗರ ನಿಧನ
- ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: ದ್ವಿತೀಯ ದರ್ಜೆ ಸಹಾಯಕ ಹಾಗೂ ಜವಾನ ಸೇರಿ 9 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
- ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ – ಗಂಭೀರ ಗಾಯ
- ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು

- Advertisement -








