Saturday, July 25, 2026
spot_imgspot_img
spot_imgspot_img

ಕಾರ್ಕಳ: ಕಿರು ಸೇತುವೆ ಬಳಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ

- Advertisement -
- Advertisement -

ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರು ಸೇತುವೆ ಬಳಿ ಜೂ.21ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.

ಸೇತುವೆ ಪಕ್ಕದಲ್ಲಿರುವ ಮನೆಯವರಿಗೆ ಮಗು ಅಳುವ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಶಬ್ದ ಎಲ್ಲಿಂದ ಕೇಳಿ ಬರುತ್ತಿದೆ ಎಂದು ಶೋಧ ನಡೆಸಿದಾಗ ಕಿರು ಸೇತುವೆ ಕೆಳಭಾಗದಲ್ಲಿ ಮಗು ಇರುವುದು ಕಂಡು ಬಂದಿದೆ.

ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ವಿಚಾರಣೆ ನಡೆಸಿ ಆ್ಯಂಬುಲೆನ್ಸ್ ಮೂಲಕ ಮಗುವನ್ನು ಠಾಣೆಗೆ ಕರೆತಂದಿದ್ದಾರೆ. ಅದಾಗಲೇ ಮಗು ಉಸಿರು ನಿಲ್ಲಿಸಿತ್ತು. ಮಳೆಯಿಂದಾಗಿ ಮಗು ಪ್ರಾಣ ಬಿಟ್ಟಿರಬಹುದು ಎನ್ನಲಾಗಿದೆ. ನವಜಾತ ಶಿಶುವನ್ನು ಸೇತುವೆ ಪಕ್ಕ ಬಿಸಾಕಿ ಹೋಗಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!