- Advertisement -
- Advertisement -

ಮುಂಬಯಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಉದ್ಯಮಿ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದು, ಕಂಪನಿಯ ಅಧಿಕಾರವನ್ನು ಹಿರಿಯ ಪುತ್ರ ಆಕಾಶ್ ಅಂಬಾನಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 27ರಂದು ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಆಕಾಶ್ ಅಂಬಾನಿ ಅವರನ್ನು ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲು ಅನುಮತಿ ನೀಡಿದೆ ಎನ್ನಲಾಗಿದೆ.

ಇನ್ನು ಭಾರತದ ಅತೀ ದೊಡ್ಡ ಟೆಲಿಕಾಂ ಆಪರೇಟರ್ ಸಂಸ್ಥೆಯಾದ ರಿಲಯನ್ಸ್ ಜಿಯೋ ಏಪ್ರಿಲ್ ತಿಂಗಳಿನಲ್ಲಿ 16.8 ಲಕ್ಷ ಮೊಬೈಲ್ ಸಬ್ಸ್ ಕ್ರೈಬರ್ಸ್ ಅನ್ನು ಹೊಂದಿದೆ..

- Advertisement -