Sunday, August 9, 2026
spot_imgspot_img
spot_imgspot_img

ಕುಂಬ್ರ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ತಂದೆ ಸಾವು, ಮಗ ಗಂಭೀರ..!

- Advertisement -
- Advertisement -

ಪುತ್ತೂರು: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂಬ್ರದಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಪಂಜಿಗುಡ್ಡೆ ನಿವಾಸಿ ರಘುರಾಮ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಬೈಕ್ ಮತ್ತು ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಘುರಾಮ್ ಶೆಟ್ಟಿ ಸಾವನ್ನಪ್ಪಿದ್ದು, ಸಹ ಸವಾರ ರಘುರಾಮ್ ರವರ ಮಗ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ರಘುರಾಮ್ ಶೆಟ್ಟಿಯವರು ತನ್ನ ಮಗನನ್ನು ಬೆಂಗಳೂರಿಗೆ ಬಸ್ ಗೆ ಬಿಡಲು ಪುತ್ತೂರಿಗೆ ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕುಂಬ್ರ ಸಮೀಪ ಓಮ್ನಿ ಕಾರೊಂದಕ್ಕೆ ಡಿಕ್ಕಿಯಾಗಿದ್ದು, ಈ ವೇಳೆ ರಘುರಾಮ ಶೆಟ್ಟಿ ರವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಅಪಘಾತದಿಂದಾಗಿ ರಘುರಾಮ ಶೆಟ್ಟಿಯವರ ಮಗನ ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!